News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರಿನಾದ್ಯಂತ 50 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

Latest News
Photo Credit :

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ರಾಜ್ಯ ಸರಕಾರ ಬೆಂಗಳೂರು ನಗರಾದ್ಯಂತ ಹೆಚ್ಚುವರಿ ಪೊಲೀಸರು ಮತ್ತು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಗೋಪಾಲಯ್ಯ ಮತ್ತು ಸ್ಥಳಿಯ ಕಾರ್ಪೋರೇಟರ್‌ಗಳ ಜೊತೆಯಲ್ಲಿ ನಿಂತು ಕಾರ್ಯಕ್ರಮ ನೆರವೇರಿಸುತ್ತಿದ್ದೇವೆ. ಎಲ್ಲವೂ ಸುಗಮವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಸರಕಾರ ವಿಶೇಷ ಗಮನ ನೀಡಿದೆ.

ಬೆಂಗಳೂರು ನಗರದಲ್ಲಿ 20ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದು ಅಲ್ಲದೇ 1500 ಪೊಲೀಸರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಕರೆಯಿಸಲಾಗಿದೆ. ಎರಡು ಕೇಂದ್ರಿಯ ಮೀಸಲು ಪೊಲೀಸ್ ಪಡೆ, 50 ತುಕಡಿ ಕೆಎಸ್‌ಆರ್‌ಪಿ ಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.

ಎಂಥಹುದೇ ಅಹಿತರಕರ ಘಟನೆ ನಿಭಾಯಿಸಲು ಪೊಲೀಸರು ಮತ್ತು ಅಧಿಕಾರಿಗಳು ಸಿದ್ಧರಾಗಿದ್ದಾರೆ. ಎಷ್ಟೇ ಪೊಲೀಸರನ್ನು ನಿಯೋಜಿಸಿದರು ಕೂಡ ಸಾರ್ವಜನಿಕರು ಎಲ್ಲೆ ಮೀರದಂತೆ ಗೌರವದಿಂದ ನಡೆದುಕೊಳ್ಳಬೇಕಿದೆ. ದೃಶ್ಯ ಮಾಧ್ಯಮಗಳ ಮೂಲಕ ಮನೆಯಲ್ಲಿಯೇ ಕುಳಿತು ನೋಡಬಹುದು ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು