ಬೆಂಗಳೂರು

ಬೆಂಗಳೂರು :  ಅಪಾಯದ ಅಂಚಿನಲ್ಲಿ 404 ಕಟ್ಟಡಗಳು

ಬೆಂಗಳೂರು : ಶಿಥಿಲಗೊಂಡ ಬಹುಮಹಡಿ ಕಟ್ಟಡಗಳು ಒಂದರ ಹಿಂದೆ ಒಂದು ಕುಸಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 404 ಕಟ್ಟಡಗಳು ಅಪಾಯದ ಅಂಚಿನಲ್ಲಿದೆ ಎಂದು ಬಿಬಿಎಂಪಿ ವರದಿ ತಿಳಿಸಿದೆ. ಪ್ರಾರ್ಥಮಿಕ ಸರ್ವೇಯಲ್ಲಿ ಕಟ್ಟಡಗಳ ಸದೃಢತೆ ಹಾಗೂ ನಿರ್ಮಾಣದ ವರ್ಷದ ಆಧಾರದ ಮೇಲೆ ಕಟ್ಟಡ ಕುಸಿಯುವ ಹಂತದಲ್ಲಿದೆ ಎಂದು ಬಿಬಿಎಂಪಿ ಗುರುತಿಸಿದೆ.

15 ದಿನಗಳ ಕಾಲ ಸರ್ವೆ ನಡೆಸಿದ್ದು, ಪ್ರಾಥಮಿಕ ವರದಿ ಪ್ರಕಾರ ಬೆಂಗಳೂರಿನ 404 ಕಟ್ಟಡಗಳು ಅಪಾಯದಲ್ಲಿರುವುದು ತಿಳಿದುಬಂದಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು. ಈ ಸರ್ವೆ ಪ್ರಕಾರ ದಕ್ಷಿಣ ವಲಯದಲ್ಲೇ 103 ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಪಶ್ಚಿಮ ವಲಯದಲ್ಲಿ 95 ಕಟ್ಟಡಗಳಿವೆ. ಪೂರ್ವದಲ್ಲಿ 67 ಕಟ್ಟಡಗಳು, ಮಹದೇವಪುರದಲ್ಲಿ 24 ಕಟ್ಟಡಗಳು, ರಾಜರಾಜೇಶ್ವರಿ ನಗರದಲ್ಲಿ 11, ಬೊಮ್ಮನಹಳ್ಳಿ 9, ಯಲಹಂಕ 84, ದಾಸರಹಳ್ಳಿ 44 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಬಿಬಿಎಂಪಿ ತಿಳಿಸಿದೆ.

ಅಪಾಯದಲ್ಲಿರುವ ಕಟ್ಟಡಗಳ ವರದಿ ಬಂದ 24 ಗಂಟೆಗಳಲ್ಲಿ ಅವುಗಳನ್ನು ನೆಲಸಮ ಮಾಡಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019ರಲ್ಲಿನ ಸರ್ವೆಯಲ್ಲಿ 185 ಕಟ್ಟಡಗಳು ಅಪಾಯದಲ್ಲಿತ್ತು. ಆದರೆ ಈವರೆಗೆ 10 ಕಟ್ಟಡಗಳನ್ನು ಮಾತ್ರ ನೆಲಸಮ ಮಾಡಲಾಗಿದ್ದು, ಉಳಿದ 175 ಕಟ್ಟಡಗಳನ್ನು ಹಾಗೆ ಉಳಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Sneha Gowda

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

13 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

50 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago