ಬೆಂಗಳೂರು : ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಆರಂಭ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಒಂದೂವರೆ ವರ್ಷದ ಬಳಿಕ ಮತ್ತೆ ಟ್ರಾಫಿಕ್ ಪೊಲೀಸರು ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಆರಂಭಿಸಲು ಮುಂದಾಗಿದ್ದಾರೆ.

ಕೋವಿಡ್ ಹಿನ್ನೆಲೆ ಕಳೆದ ಒಂದೂವರೆ ವರ್ಷದಿಂದ ಡ್ರಿಂಕ್ ಆ್ಯಂಡ್ ಡ್ರೈವ್ ಪರೀಕ್ಷೆ ನಿಲ್ಲಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅನೇಕ ಅಪಘಾತಗಳಿಗೆ ಕುಡಿದು ವಾಹನ ಚಲಾಯಿಸುತ್ತಿರುವುದು ಕಾರಣವಾಗಿದೆ. ಹಾಗಾಗಿ ಮತ್ತೆ ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ವಾರದಲ್ಲಿ 3 ದಿನ ಡ್ರಿಂಕ್‌ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶ ಹೊರಡಿಸಲಾಗಿದ್ದು, ವಾರಾಂತ್ಯದಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಭಾರೀ ದಂಡ ಬೀಳಲಿದೆ.

ವಾರಾಂತ್ಯದಲ್ಲಿ ರಾತ್ರಿ 9 ರಿಂದ ಟ್ರಾಫಿಕ್ ಪೊಲೀಸರು ಫೀಲ್ಡಿಗೆ ಇಳಿಯಲಿದ್ದು, ಕುಡಿದು ವಾಹನ ಚಲಾಯಿಸುವವರ ಮೇಲೆ ದಂಡ ಮಾತ್ರವಲ್ಲದೆ, ಕಾನೂನು ಕ್ರಮವನ್ನೂ ತೆಗೆದುಕೊಳ್ಳುವ ಸಾಧ್ಯತೆ ಇದೆ.

Sneha Gowda

Recent Posts

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

16 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

18 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

30 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

46 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

49 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

59 mins ago