ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಭಾಗವಹಿಸಲಿವೆ 30ಕ್ಕೂ ಹೆಚ್ಚು ರಾಷ್ಟ್ರಗಳು

ಬೆಂಗಳೂರು: ನಗರದಲ್ಲಿ ನ. 17ರಿಂದ 19ರವರೆಗೆ ನಡೆಯುವ 24ನೇ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್-2021)ದಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳು ಭಾಗವಹಿಸುತ್ತಿವೆ. ಇದೇ ಮೊದಲ ಬಾರಿ ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯೂರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ.

ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿಟಿಎಸ್-2021 ಕುರಿತು ವಿವರ ನೀಡಿದರು.

ಸರಕಾರದ ಜಾಗತಿಕ ನಾವೀನ್ಯತಾ ಮೈತ್ರಿಕೂಟವು (ಜಿಐಎ) ಕೈಗೊಂಡಿರುವ ರಚನಾತ್ಮಕ ಕ್ರಮಗಳಿಂದಾಗಿ 30ಕ್ಕೂ ಹೆಚ್ಚು ದೇಶಗಳೊಂದಿಗೆ ಶಿಕ್ಷಣ, ನವೋದ್ಯಮ, ಸಂಶೋಧನೆ ಹಾಗೂ ಅಭಿವೃದ್ಧಿ ಸಹಭಾಗಿತ್ವಕ್ಕೆ ಮುಂದಡಿ ಇಡಲಾಗಿದೆ. ಅಮೆರಿಕ-ಭಾರತ ವಾಣಿಜ್ಯ ಸಮಿತಿ ಮತ್ತು ವರ್ಚುಯಲ್ ರೂಪದಲ್ಲಿ ಆಸ್ಟ್ರೇಲಿಯಾದ ಸಿಡ್ನಿ ವಾಣಿಜ್ಯ ವಿಚಾರ ವಿನಿಮಯ ಶೃಂಗಸಭೆಯ ಮತ್ತು ಬಿಟಿಎಸ್ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಉಪರಾಷ್ಟ್ರಪತಿಯಿಂದ ಉದ್ಘಾಟನೆ

ನ. 17ರ ಬೆಳಗ್ಗೆ 10ಕ್ಕೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಉದ್ಘಾಟಿಸುತ್ತಾರೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಐಟಿ ಮತ್ತು ಕೌಶಲ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಸ್ ಗೋಪಾಲಕೃಷ್ಣನ್, ಬಿಟಿ ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಸ್ಟಾರ್ಟ್ಅಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.

ವಿದೇಶಿ ಸಚಿವರು ಶೃಂಗದಲ್ಲಿ ಭಾಗಿ

ಜಾಗತಿಕ ಹೂಡಿಕೆ ಮೈತ್ರಿಕೂಟದ ಭಾಗವಾಗಿ ಆಸ್ಟ್ರೇಲಿಯಾ ನ್ಯೂಸೌತ್ ವೇಲ್ಸ್ ಪ್ರಾಂತ್ಯದ ಉದ್ಯೋಗ, ಹೂಡಿಕೆ ಮತ್ತು ಪ್ರವಾಸೋದ್ಯಮ ಸಚಿವ ಸ್ಟುವರ್ಟ್ ಏಯರ್ಸ್, ಜರ್ಮನಿಯ ನಾರ್ತ್ ರೀನ್-ವೆಸ್ಟ್ ಫಾಲಿಯಾ ಪ್ರಾಂತ್ಯದ ಆರ್ಥಿಕ, ನಾವೀನ್ಯತೆ ಮತ್ತು ಡಿಜಿಟಲೀಕರಣ ಸಚಿವ ಪ್ರೊ.ಆಂಡ್ರಿಯಾಸ್ ಪಿಂಕ್ ವರ್ಟ್, ಫಿನ್ಲೆಂಡಿನ ಸಾರಿಗೆ ಮತ್ತು ಸಂಪರ್ಕ ಸಚಿವ ಟಿಮೋ ಹರಕ್ಕಾ ಹಾಗೂ ವಿಯಟ್ನಾಂನ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಮಾಜಿ ಸಚಿವ ನುಯೆನ್ ಕ್ವಾನ್ ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ನಾವೀನ್ಯತೆ ಮತ್ತು ತಂತ್ರಜ್ಞಾನ ವಲಯದ ಹತ್ತಾರು ಧಾರೆಗಳಲ್ಲಿ ಅಂತಾರಾಷ್ಟ್ರೀಯ ಸಹಭಾಗಿತ್ವವನ್ನು ಹೊಂದುವುದು ರಾಜ್ಯದ ಉದ್ದೇಶವಾಗಿದೆ. ಜಿಐಎ ಇದನ್ನು ನನಸು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯೂರೋಪಿಯನ್ ಒಕ್ಕೂಟದೊಂದಿಗೆ ಇದೇ ಮೊದಲ ಬಾರಿಗೆ ನವೋದ್ಯಮಗಳನ್ನು ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗುತ್ತಿದೆ. ಈ ಮೂಲಕ ರಾಜ್ಯವು ಜಾಗತಿಕ ಮಟ್ಟದಲ್ಲಿ ತನ್ನ ತಂತ್ರಜ್ಞಾನ ಸಾಮರ್ಥ್ಯ ಪ್ರದರ್ಶಿಸಲಿದೆ ಎಂದು ಡಾ. ಅಶ್ವತ್ಥ್‌ನಾರಾಯಣ ತಿಳಿಸಿದರು.

ಡಿಜಿಟಲ್, ಸೈಬರ್ ಸೆಕ್ಯುರಿಟಿಗೆ ಆದ್ಯತೆ

ಬಿಟಿಎಸ್-2021ರಲ್ಲಿ ಮುಖ್ಯವಾಗಿ ಸೈಬರ್ ಸೆಕ್ಯುರಿಟಿ, ಡಿಜಿಟಲೀಕರಣ, ಕೃತಕ ಬುದ್ಧಿಮತ್ತೆ, ಮೆಷಿನ್ ಲರ್ನಿಂಗ್ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯಾಧುನಿಕ ತಂತ್ರಜ್ಞಾನಗಳ ಕಡೆಗೆ ಗಮನ ಹರಿಸಲಾಗುವುದು. ಈ ಬಾರಿಯ ಶೃಂಗದಲ್ಲಿ ಆಸ್ಟ್ರೇಲಿಯಾ, ಪೆನ್ಸಿಲ್ವೇನಿಯಾ, ಯುನೈಟೆಡ್ ಕಿಂಗ್ ಡಂ, ಟೊರಾಂಟೋ ಬಿಜಿನೆಸ್ ಡೆವಲಪ್ಮೆಂಟ್ ಸೆಂಟರ್, ಜರ್ಮನಿ ಮತ್ತು ಅಮೆರಿಕ ದೇಶಗಳ ವರ್ಚುಯಲ್ ಬೂತ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Sneha Gowda

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

16 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

32 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

51 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

55 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago