ಬೆಂಗಳೂರು : ಐಷಾರಾಮಿ ಕಾರಿನ ಮತ್ತೊಂದು ಕಾರು ಅಪಘಾತಕ್ಕೀಡಾಗಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ತಡರಾತ್ರಿ ಮದ್ಯಪಾನ ಮಾಡಿ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಪೋರ್ಶ್ ಕಾರಿನ ಮಾಲೀಕ ಜುವೇರ್, ಇಟಿಯೋಸ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಆರ್ಮಿ ಆಸ್ಪತ್ರೆಯ ಗೇಟಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯಾದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಅಪಘಾತವಾದ ರಭಸಕ್ಕೆ ಕಾರಿನ ಪೆಟ್ರೋಲ್ ಟ್ಯಾಂಕ್ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಹಲಸೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ಯಪಾನ ಮಾಡಿ ಕಾರು ಚಲಾಯಿಸಿದ ಚಾಲಕ ಜುವೇರ್ ನನ್ನು ವಶಕ್ಕೆ ಪಡೆದಿದ್ದಾರೆ.