ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 30 ಲಕ್ಷ ರೂ ಮೌಲ್ಯದ 500 ಎಂಡಿಎಂಎ, ಎಕ್ಸ್ಟಸಿ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ನಗರದ ಕೊಡಿಗೆಹಳ್ಳಿಯಲ್ಲಿ ಎಂಡಿಎಂಎ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.