News Karnataka Kannada
Sunday, May 05 2024
ಬೆಂಗಳೂರು

ಬೆಂಗಳೂರು: ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

Airport
Photo Credit :

ಬೆಂಗಳೂರು: ಕೊರೊನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು, ಎ-ಕೆಟಗರಿಯಲ್ಲಿರುವ 99 ದೇಶಗಳಿಂದ ಬರುವವರಿಗೆ ಎರಡೂ ಡೋಸ್‌ ಲಸಿಕೆ ಪಡೆದಿದ್ದರೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೊರೊನಾ ಸೋಂಕು ಹೆಚ್ಚಿರುವ ದೇಶಗಳಿಂದ ವಿಮಾನ ನಿಲ್ದಾಣ ಹಾಗೂ ಬಂದರು ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್‌ ವರದಿ ಹೊಂದಿದ್ದರೂ ಮತ್ತೂಮ್ಮೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಬೇಕು ಮತ್ತು ಹೋಂ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಸರಕಾರ ಆದೇಶಿಸಿದೆ. ಸೋಂಕು ಹೆಚ್ಚು ಎಂದು ಗುರುತಿಸಿರುವ ಯೂರೋಫ್ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೊಟ್ಸಾನಾ, ಚೀನಾ, ಮ್ಯಾರಿಷಸ್‌, ನ್ಯೂಜಿಲೆಂಡ್‌ನಿಂದ ಬರುವವರು ಆಗಮಿಸುವ 72 ಗಂಟೆಗಳಿಗಿಂತ ಮೊದಲು ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಅಪ್‌ಲೋಡ್‌ ಮಾಡಬೇಕು. ಜತೆಗೆ ರಾಜ್ಯಕ್ಕೆ ಆಗಮಿಸಿದ ಬಳಿಕವೂ ಮತ್ತೂಮ್ಮೆ ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್‌ ಬಂದರೂ 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು. 8ನೇ ದಿನ ಮತ್ತೂಮ್ಮೆ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು