ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಐಶಾರಾಮಿ ಕಾರಿಗೆ ಬೆಂಕಿ

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ​ಗಳನ್ನ ತಂದು ಬೆಂಕಿ ಹಚ್ಚಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯ ಬಗ್ಗೆ ಶಾಸಕ ಸತೀಶ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘1:23ಕ್ಕೆ ದುಷ್ಕರ್ಮಿಗಳು ಬಂದಿದ್ದು, ಆ ಕಡೆ ಈ ಕಡೆ ನೋಡಿ ಎರಡು ಗಾಡಿಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಾರೆ’, ಕೇವಲ ಮೂರ್ನಾಲ್ಕು ನಿಮಿಷದಲ್ಲಿ ಈ ದುಷ್ಕ್ರತ್ಯ ಎಸಗಿದ್ದಾರೆ. ಆ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

1:30ಕ್ಕೆ ನಮಗೆ ಘಟನೆ ಬಗ್ಗೆ ಗೊತ್ತಾಗಿದೆ. ಬ್ಯಾಟರಿ ಸ್ಫೋಟಗೊಂಡಿದ್ದರಿಂದ ಶಬ್ದ ಬಂದು ನಮಗೆ ಎಚ್ಚರವಾಯಿತು. ಗೇಟ್ ಬಳಿ ಇದ್ದ ಪೊಲೀಸರು ಹಾಗೂ ನಮ್ಮ ವಾಚ್​ಮ್ಯಾನ್ ಓಡಿ ಬಂದರು. ಅರ್ಧಗಂಟೆ ಕಾಲ ಬೆಂಕಿಯನ್ನ ಆರಿಸುವ ಕೆಲಸವನ್ನು ಮಾಡಿದ್ದಾರೆ. ಆದರೂ ಕಾರುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ಮಾಹಿತಿ ನೀಡಿದ್ದಾರೆ.

Sampriya YK

Recent Posts

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

10 mins ago

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…

14 mins ago

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

27 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

36 mins ago

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

1 hour ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

1 hour ago