ಬೆಂಗಳೂರು

ಬೊಮ್ಮಾಯಿ ಡೈನಾಮಿಕ್ ಸಿಎಂ : ಉಪರಾಷ್ರö್ಟಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಲಕ್ಷ್ಯ ಮತ್ತು ಭೂ ಮಾಫಿಯಾದಿಂದ ಕೆರೆಗಳು ಒತ್ತುವರಿಯಾಗಿ ಮರೆಯಾಗಿವೆ, ಕರ್ನಾಟಕದ ಮುಖ್ಯಮಂತ್ರಿ ಡೈನಾಮಿಕ್ ಆಗಿದ್ದು, ಅವರು ಕೆರೆಗಳ ಸಂರಕ್ಷಣೆಗೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಕ್ಕೂರು ಆವರಣದಲ್ಲಿರುವ ಜವಾಹರ್ ಲಾಲ್ ನೆಹರು ಸೆಂಟರ್ ಅಡ್ವಾನ್ಸ್ ಸೈಂಟಿಫಿಟಿಕ್ ಸಂಶೋಧನಾ ಕೇಂದ್ರದ ನಾವೀನ್ಯತೆ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಸಂಸ್ಥೆಯು ವಿಜ್ಞಾನ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ಕೊಟ್ಟಿದ್ದು, ಜಾಗತಿಕವಾಗಿ ತನ್ನ ಸಾಧನೆಗಳಿಂದ ಗಮನ ಸೆಳೆದಿದೆ ಎಂದರು.

ಬೆOಗಳೂರು ಕೆರೆಗಳ ಊರು, ಆದರೆ, ಒತ್ತುವರಿಯಿಂದಾಗಿ ಹಲವು ಕೆರೆಗಳು ಮರೆಯಾಗಿವೆ. ಈಗ ಉಳಿದ ಕೆರೆಗಳನ್ನಾದರೂ ಪುನಶ್ಚೇತನ ಮಾಡುವ ಮೂಲಕ ಸಂರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಯಾತ್ಮಕವಾಗಿ ಒತ್ತುವರಿಯನ್ನು ತೆರವುಗೊಳಿಸಲಿದ್ದಾರೆ ಎಂದು ವೆಂಕಯ್ಯ ನಾಯ್ಡು ಹೇಳಿದರು.

ಕನ್ನಡದಲ್ಲಿಯೇ ತಮ್ಮ ಮಾತು ಆರಂಭಿಸಿದ ವೆಂಕಯ್ಯ ನಾಯ್ಡು, ಈ ಕೇಂದ್ರದ ಭೂಮಿ ಪೂಜೆಗೆ ಬಂದಿದ್ದು ಸಂತಸ ತಂದಿದೆ. ವಿಭಿನ್ನ ವೈಜ್ಞಾನಿಕ ಸಂಶೋಧನೆಗಳ ಮೂಲಕ 300 ಪೇಟೆಂಟ್ ಗಳನ್ನು ಸಂಸ್ಥೆ ತನ್ನದಾಗಿಸಿಕೊಂಡಿದೆ. ಹೊಸ ಹೊಸ ಆವಿಷ್ಕಾರಗಳ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಈ ಸಂಸ್ಥೆಯು ಉತ್ತಮ ಸೇವೆ ಸಲ್ಲಿಸುತ್ತಿದೆ. ಎಲ್ಲ ವಿಜ್ಞಾನಿಗಳು ಜನರಿಗೆ ರೈತರಿಗೆ ವೈಜ್ಞಾನಿಕವಾಗಿ ತಮ್ಮ ಸಂಶೋಧನೆಗಳ ಮೂಲಕ ಸೇವೆ ಮಾಡಬೇಕಿದೆ. ರಾಷ್ಟಿçಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು

ಕಾರ್ಯಕ್ರಮಕ್ಕೂ ಮುನ್ನ ಬೆಂಗಳೂರಿಗೆ ಬಂದಿಳಿದ ಉಪರಾಷ್ಟçಪತಿ ವೆಂಕಯ್ಯ ನಾಯ್ಡು ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಬರಮಾಡಿಕೊಂಡರು

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago