ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಈಗ ಗೊತ್ತಾಯ್ತು: ಸುರೇಶ್ ಕುಮಾರ್

ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಇಂದು ಗೊತ್ತಾಯಿತು ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಂಗೀತ ನಿರ್ದೇಶಕ ಹಂಸಲೇಖರ ಕ್ಷಮೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಹಂಸಲೇಖರಿಗೆ ಬೇಷರತ್ತಾಗಿ ಕ್ಷಮೆ ಕೇಳುವ ದೊಡ್ಡ ಗುಣವೂ ಇಲ್ಲ. ಎದುರಿಗಿನ ಜನ ಚಪ್ಪಾಳೆ ತಟ್ಟುತ್ತಾರೆ & ಶಿಳ್ಳೆ ಹಾಕುತ್ತಾರೆ ಎಂದು ಸಂದರ್ಭ ಪ್ರಜ್ಞೆ, ಸಭಾ ಪ್ರಜ್ಞೆ ಕಳೆದುಕೊಂಡು ಅನಗತ್ಯವಾಗಿ ಏನೆಲ್ಲಾ ಹೇಳಿಬಿಟ್ಟ ಮೇಲೆ ‘ಕ್ಷಮೆ, ಕ್ಷಮೆ’ ಎಂದು ಕೇಳುವುದೂ ಸಂಗೀತ ನಿರ್ದೇಶಕರು ಹೊರಹೊಮ್ಮಿಸಿರುವ ಕೆಟ್ಟ ಅಪಸ್ವರ ಎಂದು ವಿವರಿಸಿದ್ದಾರೆ.

ಎದುರಿಗೆ ಚಪ್ಪಾಳೆ ತಟ್ಟುವ ಜನರಿಗಿಂತ, ತನ್ನ ಚುಚ್ಚು ಮಾತುಗಳಿಂದ ಘಾಸಿಯಾಗುವ ಅಪಾರ ಸಂಖ್ಯೆಯ ಜನರ ಭಾವನೆ ಇಷ್ಟು ವರ್ಷ ಸಾರ್ವಜನಿಕ ಜೀವನ ನೋಡಿರುವವರಿಗೆ ಅರ್ಥವಾಗಬೇಕಿತ್ತು. ಈಗ ಕ್ಷಮೆ ಕೇಳೋ ವಿಡಿಯೋದಲ್ಲೂ ‘ಕೆಲವೊಂದು ಮಾತುಗಳು ವೇದಿಕೆಗಲ್ಲ’ ಅಂದಿದ್ದಾರೆ.

ಅಂತಹ ಮಾತುಗಳು ವೇದಿಕೆಗಲ್ಲ, ಮನಸ್ಸಲ್ಲಿದ್ದರೂ ವಿಷ ಅನ್ನೋದು ಇಷ್ಟು ವಯಸ್ಸಿನ ಹಿರಿಯರಾದವರಿಗೆ, ಇಷ್ಟೊಂದು ಅನುಭವ ಇರುವವರಿಗೆ ಗೊತ್ತಿಲ್ಲವೆ? ಇವರ ಅರ್ಥಹೀನ ಮಾತಿನಿಂದ ಪೇಜಾವರ ಶ್ರೀಗಳ ಶ್ರೇಷ್ಠ ವ್ಯಕ್ತಿತ್ವಕ್ಕೆ ಏನೂ ಕುಂದಾಗುವುದಿಲ್ಲ. ರಾಗ ತಪ್ಪಿದವರ, ವಿವೇಚನೆಯ ತಾಳ ಕಳೆದುಕೊಂಡವರ ತೂಕ ಕಡಿಮೆಯಾಯಿತು ಅಷ್ಟೇ! ಏನೇ ಆಗಲಿ. ಅವರಿಗೆ ತಿಳುವಳಿಕೆ ನೀಡಿರುವ ಅವರ ಧರ್ಮಪತ್ನಿ ಯವರಿಗೆ ನನ್ನ ಅಭಿನಂದನೆಗಳು ಎಂದು ಹಂಸಲೇಖರವರ ಪತ್ನಿಗೆ ಅಭಿನಂದಿಸಿದ್ದಾರೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

7 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago