News Karnataka Kannada
Thursday, May 02 2024
ಬೆಂಗಳೂರು

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, 7 ಜನರಿಗೆ ಗಂಭೀರ ಗಾಯ

Bengaluru: A cylinder for commercial use will be reduced to a small extent from today
Photo Credit :

ಬೆಂಗಳೂರು : ನಗರದ ಹೊರವಲಯದಲ್ಲಿನ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ  ಪರಿಣಾಮ, ಮನೆಯಲ್ಲಿದ್ದಂತ 7 ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವಂತ ಮಂಜುನಾಥ್ ರೆಡ್ಡಿ ಎಂಬುವರಿಗೆ ಸೇರಿದಂತೆ ಮನೆಯೊಂದರಲ್ಲಿ, ಉತ್ತರ ಭಾರತ ಮೂಲಕ ಏಳು ಕಾರ್ಮಿಕರು 2 ವರ್ಷಗಳಿಂದ ಬಾಡಿಗೆ ಇದ್ದರು.

ಈ ಘಟನೆ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ನಡೆದಿದ್ದು, ಸಿಲಿಂಡರ್ ಬ್ಲಾಸ್ಟ್ ನಿಂದಾಗಿ ಮನೆ ಕೂಡ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್, ಶಾಂತಿಬೈ, ಪ್ರಕಾಶ್, ಜೈಮುಲ್, ಮಂಜು ಹಾಗೂ ವಲ್ಲಿ ಎಂಬಂತ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು