ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯಿಂದ ಬರುತ್ತಿದ್ದ ಜೈಲೊ ಕಾರು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು, ನಂತರ ಎದುರುಗಡೆ ಬರುತ್ತಿದ್ದ ಜೆಸ್ಟ್ ಕಾರಿನ ಮೇಲೆ ಬಿದ್ದಿದೆ.
ಇದರ ಪರಿಣಾಮ ಜೆಸ್ಟ್ ಕಾರಿನಲ್ಲಿದ್ದ ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೈಲೊಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಬೆಟ್ಟಹಲಸೂರು ಕ್ರಾಸ್ನ ಬಳಿ ನಡೆದಿದೆ. ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಸಂಬಂಧ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.