News Karnataka Kannada
Monday, April 29 2024
ಬೆಂಗಳೂರು

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಟ್ವಿಟ್ಟರ್ ನಲ್ಲಿ 1 ಲಕ್ಷ ಫಾಲೋವರ್ಸ್

Cm Bs Yadiyurappa Main
Photo Credit :

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಮಿಲಿಯನ್ ಹಿಂಬಾಲಕರನ್ನು ಪಡೆದುಕೊಂಡಿದ್ದಾರೆ. ಕರ್ನಾಟಕದ ಯಾವ ರಾಜಕಾರಣಿಯೂ ಟ್ವಿಟ್ಟರ್‌ನಲ್ಲಿ ಹತ್ತು ಲಕ್ಷ ಹಿಂಬಾಲಕರನ್ನು ಪಡೆದಿರಲಿಲ್ಲ. ಹೀಗಾಗಿ ಬಿಎಸ್‌ವೈ, ಈ ಸಾಧನೆ ಮಾಡಿದ ರಾಜ್ಯದ ಮೊದಲ ರಾಜಕಾರಣಿ ಎನಿಸಿಕೊಂಡಿದ್ದಾರೆ.

ಈ ಸಂತಸದ ಸಂಗತಿಯನ್ನು ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಟ್ವಿಟ್ಟರ್‌ನಲ್ಲಿ ಒಂದು ಮಿಲಿಯನ್ ಹಿಂಬಾಲಕರು! ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು’ ಎಂದು ಯಡಿಯೂರಪ್ಪ ಹೇಳಿದ್ದಾರೆ.

‘ಟ್ವಿಟರ್ ನಲ್ಲಿ ನಮ್ಮ ಬಳಗ ದಶಲಕ್ಷದ ಮೈಲಿಗಲ್ಲನ್ನು ದಾಟಿರುವುದು ನಿಮ್ಮೆಲ್ಲರ ಪ್ರೀತಿ, ಅಭಿಮಾನಗಳ ಸಂಕೇತ ಎಂದು ಭಾವಿಸುತ್ತೇನೆ. ತಮ್ಮ ಬೆಂಬಲ, ಅಭಿಮಾನದಿಂದ ಸದಾ ನನ್ನನ್ನು ಹಾರೈಸುತ್ತಿರುವ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು!’ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ದೇಶಾದ್ಯಂತ ಹೆಚ್ಚು ಚರ್ಚೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಿಂಬಾಲಿಸುವವರ ಸಂಖ್ಯೆ ಹೆಚ್ಚಾಗಿದೆ. ಮಾಜಿ ಸಿಎಂ ಆದ ಬಳಿಕವೂ ಒಂದು ಮಿಲಿಯನ್ ಫಾಲೋವರ್‌ಗಳನ್ನು ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು