ಬೆಂಗಳೂರು : ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಮುಂದಿನ ಐದು ವರ್ಷದಲ್ಲಿ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಸಿಎಂ, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ. ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ ದೊಡ್ಡದಿದೆ. ಹಿಂದೆ ಚಾಮರಾಜನಗರ ಜಿ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಹಾಗೂ ಸುರೇಶ್ಕುಮಾರ್ ಅವರು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮಲೆಮಹಾದೇಶ್ವರ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಚಿವರಾದ ಎಸ್. ಟಿ. ಸೋಮಶೇಖರ್,ಶಶಿಕಲಾ ಜೊಲ್ಲೆ , ವಿ. ಸುನಿಲ್ಕುಮಾರ್, ಶಾಸಕರಾದ ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನರೇಂದ್ರ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.