News Karnataka Kannada
Friday, May 03 2024
ಬೆಂಗಳೂರು

ಮುಂದಿನ ಮೂರು ದಿನ ರಾಜ್ಯದಲ್ಲಿ ಮತ್ತಷ್ಟು ತಾಪಮಾನ ಏರಿಕೆ

Untitled 140
Photo Credit :

ಬೆಂಗಳೂರು : ಬಿಸಿಲಿನಿಂದ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಾಮಾನ ಭಾರೀ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಲವಾಗಿದೆ. ಕಲಬುರಗಿಯಲ್ಲಿ ಬುಧವಾರ ಗರಿಷ್ಠ ತಾಪಮಾನ 41.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು 39.4, ವಿಜಯಪುರ 37.9, ಗದಗ 38.4, ಬೆಂಗಳೂರು 35.0, ಬೆಳಗಾವಿ 36.5 ಬಳ್ಳಾರಿ 39.4 ಉಷ್ಣಾಂಶ ದಾಖಲಾಗಿದೆ. ಈ ಮೂಲಕ ಬಿಸಿಲಿನ ಬೇಗೆಗೆ ರಾಜ್ಯದ ಜನರು ತತ್ತರಿಸಿದ್ದಾರೆ.

ಈ ಬಾರಿ ವಾಡಿಕೆಗಿಂತ ಮುನ್ನ ಬೇಸಿಗೆ ಶುರುವಾಗಿದ್ದು, ಮೂರು ತಿಂಗಳು ಇರುತ್ತಿದ್ದ ಬೇಸಿಗೆ ಈ ವರ್ಷ 4 ತಿಂಗಳ ಕಾಲ ಇರಲಿದೆ. ಕಳೆದ ನವೆಂಬರ್ ನಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಚಳಿಗಾಲದ ಅವಧಿ ಇಳಿಮುಖವಾಗಿತ್ತು. ಈ ಹಿನ್ನೆಲೆಯಲ್ಲಿ ವಾಡಿಕೆಗಿಂತ ಮುನ್ನ ಬೇಸಿಗೆ ಆರಂಭವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು