News Karnataka Kannada
Monday, May 06 2024
ಬೆಂಗಳೂರು

ಮೂಡಿಗೆರೆ ಸೇರಿದಂತೆ 83 ತಾಲೂಕುಗಳು ಪ್ರವಾಹಪೀಡಿತ ಎಂದು ಘೋಷಣೆ

Rain 18072021
Photo Credit :

ಬೆಂಗಳೂರು: ಈ ಹಿಂದೆ 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿತ್ತು. ಮಳೆ ಹೆಚ್ಚಾಗಿ ಇದೀಗ ಮತ್ತೆ ಹಾನಿಯಾಗಿದೆ. ಹೀಗಾಗಿ ಹೊಸದಾಗಿ 22, ಒಟ್ಟು 83 ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೊಕ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹಾಗೂ ಹೊಸನಗರಗಳನ್ನ ಪ್ರವಾಹ ಪೀಡಿತವೆಂದು ಘೋಷಿದ್ದೇವೆ ಎಂದರು.

ಪ್ರವಾಹ ಪೀಡಿತ ಸ್ಥಳಗಳಿಗೆ ಒಂದೆರಡು ಬಾರಿ ನಾನು ಭೇಟಿ ನೀಡಿದ್ದೇನೆ. ಪ್ರವಾಹ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಸಿಡಿಲಿನಿಂದ ಹಲವರು ಸಾಯುತ್ತಿದ್ದಾರೆ. ಅದರ ಎಚ್ಚರಿಕೆ ಬಗ್ಗೆ ಯೋಜನೆ ಇದೆ. ಒಂದೂವರೆ ಕಿ.ಮೀ.ವರೆಗೆ ಕೇಳಿಸುವಷ್ಟು ಅಲರ್ಟ್ ಮಾಡಲಾಗುತ್ತದೆ. ಮೈಕ್ ಸಿಸ್ಟಂ ಮೂಲಕ ಅಲರ್ಟ್ ಮಾಡಲಾಗುತ್ತದೆ. ಗ್ರಾಮಪಂಚಾಯಿತಿಗಳಲ್ಲಿ ಅಲರ್ಟ್ ಆಗಲಿದೆ. ಶೀಘ್ರವೇ ಈ ಹೊಸ ವ್ಯವಸ್ಥೆ ಅಳವಡಿಕೆ ಮಾಡುತ್ತೇವೆ ಎಂದು ವಿವರಿಸಿದರು.

ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಏಕಾಂಗಿಯಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಸರ್ಕಾರ ಭರವಸೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು