ಮೂರು ವರ್ಷದ ಮಗುವಿಗೂ ಇನ್ನೊಂದು ಅರ್ಧ ಟಿಕೆಟ್

 ಬೆಂಗಳೂರು: ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಮೂರು ವರ್ಷದ ಮಗುವಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಆರು ವರ್ಷದೊಳಗಿನ ಮಕ್ಕಳು ಉಚಿತವಾಗಿ ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ. ಆರರಿಂದ ಹನ್ನೆರಡು ವರ್ಷದ ಮಕ್ಕಳಿಗೆ ಅರ್ಧ ಟಿಕೆಟ್ ನೀಡಲಾಗುತ್ತಿದ್ದು, ಈಗ ವಯಸ್ಸಿನ ಬದಲಿಗೆ ಮಗುವಿನ ಎತ್ತರ ಪರಿಗಣಿಸಿ ಟಿಕೆಟ್ ಕೊಡಲಾಗುತ್ತಿದೆ.

ಮಗುವಿನ ವಯಸ್ಸು ಎರಡು ವರ್ಷ, ಮೂರು ವರ್ಷವಾಗಿದ್ದರೂ ಮೂರು ಅಡಿ ಎತ್ತರವಿದ್ದರೆ ಅಂತಹ ಪೋಷಕರು ಮಗುವಿಗೆ ಅರ್ಧ ಟಿಕೆಟ್ ಪಡೆಯುವಂತಾಗಿದೆ.

ಮಕ್ಕಳ ಎತ್ತರ ನೋಡಲು ಬಸ್ ಮಧ್ಯದಲ್ಲಿರುವ ಕಂಬಿಗಳ ಮೇಲೆ 3 ಅಡಿ, 4 ಅಡಿ ಎತ್ತರಕ್ಕೆ ಬಣ್ಣದಲ್ಲಿ ಗುರುತು ಮಾಡಲಾಗಿದೆ. ಟಿಕೆಟ್ ನಿರಾಕರಿಸುವ ಪೋಷಕರ ಮಕ್ಕಳನ್ನು ಕಂಬಿ ಬಳಿ ನಿಲ್ಲಿಸಿ ಎತ್ತರ ನೋಡಿ ಟಿಕೆಟ್ ನೀಡಲಾಗುತ್ತದೆ.

ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಮಕ್ಕಳು ಮೂರು ಅಡಿ ಎತ್ತರ ಇದ್ದರೆ ಪೂರ್ಣ ಟಿಕೆಟ್ ಪಡೆಯಬೇಕು. ಟಿಕೆಟ್ ಕೌಂಟರ್ ಗಳಲ್ಲಿ ಎತ್ತರ ಅಳೆಯುವ ವ್ಯವಸ್ಥೆ ಮಾಡಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಿಯಲ್ಲಿಯೂ ಇಂತಹ ವ್ಯವಸ್ಥೆ ಮಾಡಿರುವುದರಿಂದ ಬಡ ಪ್ರಯಾಣಿಕರಿಗೆ ಬಿಸಿತುಪ್ಪವಾಗಿ ಪರಿಗಣಿಸಿದೆ. ಇನ್ನು ಕೆಲವು ಚಿಕ್ಕ ಮಕ್ಕಳ ಬೆಳವಣಿಗೆ ಹೆಚ್ಚಾಗಿದ್ದರೆ ಅಂತಹ ಪೋಷಕರಿಗೆ ಇರಿಸುಮುರಿಸು ಆಗುತ್ತದೆ ಎನ್ನಲಾಗಿದೆ.

Ashika S

Recent Posts

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 min ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

12 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

17 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

32 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

43 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

58 mins ago