ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್ ನಿಂದ ರಾಜ್ಯಕ್ಕೆ ವಾಪಸ್ ಆಗಲಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಬಗ್ಗೆ ಮಹತ್ವದ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ದಾವೋಸ್ ಗೆ ಭೇಟಿ ನೀಡುವ ಮುನ್ನ ಸಿಎಂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಪರಿಶೀಲಿಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಬೊಮ್ಮಾಯಿ ದಾವೋಸ್ ನಿಂದ ವಾಪಸ್ ಬಂದ ಬಳಿಕ ಆರ್ಥಿಕ ಇಲಾಖೆ, ವಾಣಿಜ್ಯ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಕುರಿತು ನಿರ್ಧಾರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ.