ಮೈಸೂರು ದೇವಸ್ಥಾನ ತೆರವು ಪ್ರಕರಣಕ್ಕೆ ಕೆ.ಎಸ್ ಈಶ್ವರಪ್ಪ ಖಂಡನೆ

ಬೆಂಗಳೂರು: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದ ಪ್ರಕರಣ ತಪ್ಪು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಮೈಸೂರು ದೇವಸ್ಥಾನ ತೆರವು ಪ್ರಕರಣಕ್ಕೆ ಖಂಡನೆ ವ್ಯಕ್ತಪಡಿಸಿದರು. ಸಿಎಂಗೆ, ಸಂಬಂಧಪಟ್ಟ ಸಚಿವರಿಗೆ ಹೇಳದೆ ದೇವಸ್ಥಾನ ತೆರವುಗೊಳಿಸಿದ್ದು ತಪ್ಪು. ಡಿಸಿ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಏನೇ ಹೇಳಬಹುದು, ಆದರೆ ದೇವಸ್ಥಾನಗಳ ರಕ್ಷಣೆ‌ ಮಾಡುವುದು ಅಗತ್ಯವಿದೆ ಎಂದರು.

ಡಿಸಿಗಳು ತುರ್ತಾಗಿ ಇಂತಹ ಕ್ರಮಕ್ಕೆ ಮುಂದಾಗಬಾರದು. ನಾನು ಸಿಎಂ ಜತೆ ಈ ವಿಚಾರವಾಗಿ ಚರ್ಚೆ ಮಾಡುತ್ತೇನೆ.‌ ಇನ್ಮುಂದೆ ಒಂದೇ ಒಂದು ದೇವಸ್ಥಾನ ಒಡೆಯಲು‌ ನಾವು ಬಿಡುವುದಿಲ್ಲ ಎಂದು ಹೇಳಿದರು. ಇಡೀ ಕರ್ನಾಟಕ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ಭಯ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರ ಇರುವಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೇವಸ್ಥಾನ ಒಡೆದು ಹಾಕಿದ್ದು ತಪ್ಪು. ಸುಪ್ರಿಂ ಕೋರ್ಟ್ ಅನೇಕ ಆದೇಶಗಳು ಬೇಕಾದಷ್ಟಿವೆ. ಸಂಸ್ಕೃತಿ ನಂಬಿಕೊಂಡು ಇರುವಂತ ಪಕ್ಷ ಬಿಜೆಪಿ.‌ ದೇವಸ್ಥಾನ ತೆರವು ಬಗ್ಗೆ ನಂದಂತೂ ಒಪ್ಪಿಗೆ ಇಲ್ಲ ಎಂದರು.

ಒಂದೇ ಒಂದು ದೇವಸ್ಥಾನ ಒಡೆಯುವುದು ತಪ್ಪು. ಯಾಕೆ ದೇವಸ್ಥಾನ ಮಾತ್ರ ಮುಟ್ಟಿದರು ಅನ್ನೋದು ಕೂಡ ಪ್ರಶ್ನೆಯೇ?ಕಾಂಗ್ರೆಸ್ ನಾಯಕರು ಹೇಳಿದ್ದರಲ್ಲೂ ಯಾವುದೇ ತಪ್ಪಿಲ್ಲ. ಈಗಲಾದರೂ ಕಾಂಗ್ರೆಸ್ ನಾಯಕರಿಗೆ ದೇವಸ್ಥಾನ ಉಳಿಸಬೇಕು ಅಂತ ಅನಿಸಿದೆಯಲ್ಲ ಅದು ಮುಖ್ಯ ಎಂದರು. ಯಾರ ವಿರುದ್ದ ಕ್ರಮ ಆನ್ನೋದು ನನ್ನ ಉದ್ದೇಶವಲ್ಲ.‌ಆದರೆ ಇಡೀ ರಾಜ್ಯದಲ್ಲಿ ದೇವಸ್ಥಾನಗಳನ್ನು ಯಾರೂ ಒಡೆಯಬಾರದು ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ತೇವೆ. ಎಷ್ಟೇ ದೇವಸ್ಥಾನಗಳನ್ನು ಪಟ್ಟಿ ಮಾಡಿರಲಿ, ಯಾವುದನ್ನೂ ಒಡೆಯಬಾರದು ಎಂದು ಹೇಳಿದರು.

Sneha Gowda

Recent Posts

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

4 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

55 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

55 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago