News Karnataka Kannada
Friday, May 03 2024
ಬೆಂಗಳೂರು

ಯುವತಿ ಅಂಗಾಂಗ ಮುಟ್ಟಿ ಹಲ್ಲೆ: ದೂರು ದಾಖಲು

Abuse 14092021
Photo Credit :

ಬೆಂಗಳೂರು: ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಯುವತಿಯೊಬ್ಬರ ಅಂಗಾಂಗಗಳನ್ನು ಮುಟ್ಟಿ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿನಗರದ ನಿವಾಸಿ 22 ವರ್ಷದ ಯುವತಿ ದೂರು ನೀಡಿದ್ದಾರೆ. ಅಪರಿಚಿತ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಜಯನಗರದ ಕಂಪನಿಯೊಂದರ ಉದ್ಯೋಗಿ ಆಗಿರುವ ಯುವತಿ, ಭಾನುವಾರ ಬೆಳಿಗ್ಗೆ 8.10ರ ಸುಮಾರಿಗೆ ಲ್ಯಾಂಗ್‌ಫೋರ್ಡ್‌ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಯುವಕ, ತಬ್ಬಿಕೊಂಡು ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಅದನ್ನು ಪ್ರಶ್ನಿಸಿದ್ದಕ್ಕೆ, ಹಲ್ಲೆ ಮಾಡಿದ್ದ. ಯುವತಿ ರಕ್ಷಣೆಗಾಗಿ ಕೂಗಾಡಿದ್ದರು. ಸ್ಥಳೀಯರು ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗುತ್ತಿದೆ ಎಂದೂ ಪೊಲೀಸರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು