ಬೆಂಗಳೂರು

ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲಾ -ಕಾಲೇಜು ಆರಂಭ

ಬೆಂಗಳೂರು :  ರಾಜ್ಯದಲ್ಲಿ ಶಾಲಾ-ಕಾಲೇಜುಗಳು  9ರಿಂದ 12ನೇ ತರಗತಿ ವರೆಗೆ ಆ.23ರಿಂದ ಪ್ರಾರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,  ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಒಂದು ವಾರ ಶಾಲೆಯನ್ನು ಮುಚ್ಚುವ ಜೊತೆಗೆ ಸ್ಯಾನಿಟೈಸ್ ಮಾಡಿ ವಾರದ ನಂತರ ಶಾಲೆ ಆರಂಭಿಸಲಾಗುವುದು. ಜಿಲ್ಲಾವಾರು ಪಾಸಿಟಿವಿಟಿ ದರ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪೋಷಕರು, ಶಾಲೆಯ ಶಿಕ್ಷಕ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಆಗಸ್ಟ್ 23 ರಂದು 9 ರಿಂದ 12 ನೇ ತರಗತಿವರೆಗೆ ಶಾಲೆ ತೆರೆಯಲು ಎಸ್​ಓಪಿ ತಯಾರಿಸಲಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಹಿತಿ ನೀಡಿದರು.

Raksha Deshpande

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

5 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

25 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

48 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago