News Karnataka Kannada
Monday, April 29 2024
ಬೆಂಗಳೂರು

ರಾಜ್ಯದಲ್ಲಿ ಇಂದಿನಿಂದ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಡಿಸೆಂಬರ್ 4 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಗುಜರಾತ್​ ಸೇರಿದಂತೆ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದಿನಿಂದ ಡಿ. 4ರವರೆಗೂ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು