News Karnataka Kannada
Wednesday, May 01 2024
ಬೆಂಗಳೂರು

ರಾಜ್ಯದಲ್ಲಿ ಇಂದು 283 ಜನರಿಗೆ ತಗುಲಿದ ಕೊರೊನಾ ಸೋಂಕು

coivd 19
Photo Credit :

ಬೆಂಗಳೂರು : ರಾಜ್ಯದಲ್ಲಿ ಇಂದು 283 ಜನರಿಗೆ ಕೊರೊನಾ ಸೋಂಕು ತಗುಲಿದೆ. 290 ಗುಣಮುಖರಾಗಿ ಬಿಡುಗಡೆಯಾಗಿದ್ದು, 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,90,235 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,44,099 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

38,118 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ. 7989 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 159 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 104 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6419 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 159, ದಕ್ಷಿಣ ಕನ್ನಡ 10, ಹಾಸನ 24, ಕೋಲಾರ 11, ಮೈಸೂರು 15 ಹೊಸ ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರ 1, ಕೊಪ್ಪಳ 1, ತುಮಕೂರು 1, ಮೈಸೂರು 2, ಉಡುಪಿ 1 ಸೇರಿ ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು