ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್ 23 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.