ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ತುಮಕೂರು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.