News Karnataka Kannada
Monday, May 06 2024
ಬೆಂಗಳೂರು

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆ

Corona Main Newsk 5059978686
Photo Credit :

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಲ್ಲಿ ಮುಂದುವರೆದಿದೆ. ಇಂದು 261 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟರೇ, ಸೋಂಕಿತರಾದಂತ 296 ಜನರು ಗುಣಮುಖರಾಗಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ 157, ದಕ್ಷಿಣ ಕನ್ನಡ 16, ಮೈಸೂರು 13, ತುಮಕೂರು 15 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದು ತಿಳಿಸಿದೆ.

ಇನ್ನೂ ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ಪತ್ತೆಯಾಗಿವೆ. ಇನ್ನುಳಿದ ಜಿಲ್ಲೆಗಳಲ್ಲಿ 10ಕ್ಕೂ ಕಡಿಮೆ ಕೇಸ್ ಪತ್ತೆಯಾಗಿರೋದಾಗಿ ವರದಿಯಿಂದ ತಿಳಿಸಿದೆ.

ಬೆಂಗಳೂರು ನಗರ, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು, ಮೈಸೂರಿನಲ್ಲಿ ಇಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು