News Karnataka Kannada
Monday, April 29 2024
ಬೆಂಗಳೂರು

ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ತಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಸಿಎಂ

New Project (53)
Photo Credit :
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ,ಕೇರಳ ಗಡಿಭಾಗ ಸೇರಿದಂತೆ,ರಾಜ್ಯದ ಎಲ್ಲಾ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲು ಈಗಾಗಲೇ ತಿಳಿಸಲಾಗಿದೆ,ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡ ಈ ಹಿನ್ನಲೆಯಲ್ಲಿ ಒಂದು ಮಗು ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ.ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಎಲ್ಲಾ  ಜಿಲ್ಲೆಗಳಲ್ಲಿ ಈ ನಿಫಾ ವೈರಸ್  ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ  ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಎಂದು ತಿಳಿಸಿದರು ರಾಜ್ಯದಲ್ಲಿ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.
ಈ ನಿಫಾ ವೈರಸ್ ಬಗ್ಗೆ ಎಚ್ಚರಿಕೆಯಿಂದಿರಲು ಸಾರ್ವಜನಿಕರು ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತಾಗಿ ತಜ್ಞರ ಜತೆ ಚರ್ಚೆ ನಡೆಸಲಾಗಿದೆ. ನಮಗೆ ತಜ್ಞರು ನೀಡುವ ವರದಿಗಳನ್ನು ಆಧರಿಸಿ  ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು