News Karnataka Kannada
Monday, April 29 2024
ಬೆಂಗಳೂರು

ರಾಜ್ಯದಲ್ಲಿ ಬಲವಂತ ಮತಾಂತರ ನಿಷೇಧ ಕಾನೂನು ಜಾರಿ ಕುರಿತು ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ

Basavaraja Bommai
Photo Credit :

ಬೆಂಗಳೂರು :  ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಅವರು ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ತಾಯಿ ಸೇರಿದಂತೆ ಸುಮಾರು 20 ಸಾವಿರ ಮಂದಿಯನ್ನು ಮತಾಂತರ ಮಾಡಲಾಗಿದೆ ಎಂದು ಅಧಿವೇಶನದಲ್ಲಿ ಹೇಳಿದ್ದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು