ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಲಕ್ಷಣದಿಂದ ಹವಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆಯನ್ನು ಮಾಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯಾಗಿದೆ.
ಜುಲೈ 11 ಮತ್ತು 12 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾತ್ರವಲ್ಲದೆ, ಮೀನುಗಾರರು ಸಹ ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ನೀಡಿದೆ. ಹವಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಹಾಸನ, ಉತ್ತರ ಕನ್ನಡ, ಚಿಕ್ಕ ಮಂಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ.
ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.