ಬೆಂಗಳೂರು : ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.50 ಪೈಸೆ ಹೆಚ್ಚಳ ಮಾಡುವಂತ ಹೆಸ್ಕಾಂ ಅಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಪ್ರತಿ ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗಲಿದೆ. ನಷ್ಟದ ನೆಪ ಹೇಳಿ ವಿದ್ಯುತ್ ದರ ಪ್ರತಿ ಯುನಿಟ್ ಗೆ 1.50 ರೂ. ಹೆಚ್ಚಳ ಮಾಡುವಂತೆ ಕೆಇಆರ್ ಸಿ(KERC) ಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.
ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ವಿದ್ಯುತ್ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ.