ಬೆಂಗಳೂರು : ಕರಾವಳಿ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.