ಬೆಂಗಳೂರು : ರಾಜ್ಯದಲ್ಲಿ 349 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಒಟ್ಟು 399 ಮಂದಿ ಕೊವಿಡ್ನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು 29,84,022 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 29,36,926 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 9,100 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 37,967 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 0.41 ಹಾಗೂ ಸೋಂಕಿತರ ಸಾವಿನ ಸರಾಸರಿ ಶೇ 4.01 ಇದೆ.