ಬೆಂಗಳೂರು : ರಾಜ್ಯದಲ್ಲಿಇಂದು 847 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 20 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿವೆ.
946 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,621 ಇದೆ. ಕೋವಿಡ್ ಪಾಸಿಟಿವಿಟಿ ದರ 0.57% ಹಾಗೂ ಡೆತ್ ರೆಟ್ 2.36% ಇದೆ ಎಂದು ವರದಿಗಳಲ್ಲಿರುವ ಅಂಕಿ-ಅಂಶಗಳು ತಿಳಿಸಿವೆ.