ಬೆಂಗಳೂರು : 2024ರೊಳಗೆ ನಲ್ಲಿ ರಾಜ್ಯದ ಪ್ರತಿ ಮನೆಗೆ ನಲ್ಲಿ ನೀರು ಪೂರೈಕೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸದಸ್ಯ ತುಕರಾಮ್ ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಇರುವ ನೀರಿನ ಲಭ್ಯತೆ ಇರುವ ಕಡೆ ಮನೆ ಮನೆಗೆ ನಲ್ಲಿ ನೀರು ಒದಗಿಸೋ ಯೋಜನೆ ಕೈಗೆತ್ತಿಕೊಂಡಿದ್ದೇವೆ. 95 ಲಕ್ಷ ಮನೆಗಳಿಗೆ ನೀರು ಸಮಪರ್ಕ ಒದಗಿಸುವ ಗುರಿ ಹೊಂದಿದ್ದು ಈಗಾಗಲೆ 35 ಲಕ್ಷ ಮನೆಗಳಿಗೆ ಒದಗಿಸುವ ಯೋಜನೆ ಪ್ರಗತಿಯಲ್ಲಿದೆ ಎಂದರು.