ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸುವ ವಿಶ್ವಾಸ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023 ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.
ಉತ್ತಮ ಆಡಳಿತದ ಜೊತೆಗೆ ಬಿಜೆಪಿ ಅಧಿಕಾರಕ್ಕೆ ತರುತ್ತೇನೆ. ಎಷ್ಟು ಸಮಯ ಕೆಲಸ ಮಾಡಿದ್ದೀನಿ ಎನ್ನುವುದಕ್ಕಿಂತ ಏನೇನು ಕೆಲಸ ಮಾಡಿದ್ದೀನಿ ಎನ್ನುವುದು ಮುಖ್ಯ. ನನ್ನ ಕೈಲಿ ಈಗ ಅವಕಾಶ ಇದೆ. ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಆಡಳಿತ ನೀಡುತ್ತೇನೆ ಎಂದಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ಪಕ್ಷ ಬೆಳೆಸಿದ್ದಾರೆ. ಅವರು ಸ್ಥಾನದಿಂದ ಕೆಳಗಿಳಿದು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಅವಕಾಶವನ್ನು ಸೂಕ್ತ ರೀತಿಯಲ್ಲಿ ಬಳಸಿ ಅತ್ಯುತ್ತಮ ಆಡಳಿತ ನೀಡುತ್ತೇನೆ ಎಂದಿದ್ದಾರೆ.