ಬೆಂಗಳೂರು

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂದರ್ಶಕರು ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೊರೋನಾ ಹರಡುವುದನ್ನು ತಡೆಗಟ್ಟಲು ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂದರ್ಶಕರು ಅಗತ್ಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು, ರಾಜ್ಯದಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳಲ್ಲಿ ಇಳಿಕೆಯನ್ನು ಗಮನಿಸಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಯಶಸ್ಸನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂದರ್ಶಕರು ಅಗತ್ಯ ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆ ಮಾಡುವುದು ಅನಿವಾರ್ಯವಾಗಿರುತ್ತದೆ. ಈ ಸಂಬಂಧ ಆದೇಶಗಳನ್ನು ಈಗಾಗಲೇ ಹೊರಡಿಸಲಾಗಿದೆ.

ಈ ಹಿನ್ನಲೆಯಲ್ಲಿ, ಪ್ರತಿ ಕಚೇರಿಯ ಕರ್ತವ್ಯದ ಅವಧಿಯಲ್ಲಿ ಎಲ್ಲಾ ಸಿಬ್ಬಂದಿ ಹಾಗೂ ಸಂದರ್ಶಕರು ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಖಚಿತಪಡಿಸಿಕೊಳ್ಳುವಂತೆ ಕ್ರಮವಹಿಸಲು ಒಬ್ಬ ನೋಡಲ್ ಅಧಿಕಾರಿಯನ್ನು ( ಆಯಾ ಕಚೇರಿಯ ಒಬ್ಬ ಅಧಿಕಾರಿ) ಗುರುತಿಸಿವುದು.

ಸೂಕ್ತ ಮಾಹಿತಿಯ ಹೊರತಾಗಿಯೂ ಕಚೇರಿಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಲ್ಲಿ ಗಂಭೀರ ಹಾಗೂ ಪದೇ ಪದೇ ಉಲ್ಲಂಘನೆ ಕಂಡು ಬಂದ ಪಕ್ಷದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago