ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ.

ಗುರುವಾರ ರಾತ್ರಿಯೇ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಹೊರಗೆ ಬಂದಿದ್ದ ಜನ ಮಳೆಯಲ್ಲಿ ಸಿಲುಕಿದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫ್ಲೈ ಓವರ್ ಕೆಳಗೆ ಆಶ್ರಯ ಪಡೆದಿದ್ರು.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಅಧಿಕ ಮಳೆ

ಗುರುವಾರ ರಾತ್ರಿ ಒಂದು ಗಂಟೆಗೂ ಅಧಿಕ ಕಾಲ ಬೆಂಗಳೂರಿನಲ್ಲಿ ಮಳೆಯಾಗಿದ್ದು. ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದು ಬರುವ ದೃಶ್ಯ ಕಂಡು ಬಂತು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಇನ್ನು ಮಳೆಗೆ ರಸ್ತೆಗಳು ಕೊಚ್ಚಿ ಹೋಗಿವೆ. ಪೈಪ್ ಲೈನ್ ಕಾಮಗಾರಿ ನಡೆಸಿದ್ದ ರಸ್ತೆಗಳಲ್ಲಿ ಮಾರುದ್ದು ಗುಂಡಿಗಳು ಉಂಟಾಗಿದ್ದು, ಎರಡು ಕಾರ್ ಗಳು ಸಿಲುಕಿದ್ದವು, ಕೊನೆಗೆ ಕ್ರೇನ್ ಮೂಲಕ ಮೇಲೆತ್ತಲಾಯ್ತು.

ದಕ್ಷಿಣ ಕನ್ನಡದಲ್ಲಿಯೂ ಮಳೆ

ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಹಲವೆಡೆ ಎಡೆಬಿಡದೇ ಸುರಿದಿದ್ದು, ಕೃಷಿ ಭೂಮಿ ಮತ್ತು ತೋಟಗಳಿಗೆ ಮಳೆ ನೀರು ನುಗ್ಗಿದ್ದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದೇ ರೀತಿ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನೂ ಕಳೆದ ಎರಡ್ಮೂರು ದಿನಗಳಿಂದ ಬೆಣ್ಣೆ ನಗರಿ ದಾವಣಗೆರೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಬುಧವಾರ ಸುರಿದ ಬಿರುಗಾಳಿ ಸಹಿತ ಮಳೆಗೆ 40 ಎಕರೆ ಭತ್ತ ನಾಶವಾಗಿದೆ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ 20ಕ್ಕೂ ಅಧಿಕ ರೈತರ ಭತ್ತ ನಾಶಗೊಂಡು ನೆಲ ಕಚ್ಚಿದೆ.

ಇನ್ನು ಒಂದು ವಾರದಲ್ಲಿ ಭತ್ತ ಕಟಾವು ಮಾಡಲು ರೈತರು ಸಿದ್ಧತೆ ನಡೆಸಿದ್ದರು. ರೈತರು ಎಕರೆ ಭತ್ತಕ್ಕೆ ಸುಮಾರು 25 ರಿಂದ 30 ಸಾವಿರ ರೂಪಾಯಿ ಹಣ ಖರ್ಚು ಮಾಡಿದ್ದರು, ಇದೀಗ ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ಸರ್ಕಾರ ರೈತರ ಸಹಾಯಕ್ಕೆ ಮುಂದಾಗಬೇಕಿದೆ ಎಂದು ಅನ್ನದಾತರು ಆಗ್ರಹಿಸಿದ್ದಾರೆ.

ಕೇರಳದ 5 ಜಿಲ್ಲೆಗಳಲ್ಲಿ ಭಾರಿ ಮಳೆ

ಇನ್ನು ಕೇರಳದ ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡಿನ ಚೆನ್ನೈ, ತಿರುವೆಲ್ಲೂರು, ಚೆಂಗಲ್‌ಪಟ್ಟು, ಕಾಂಚಿಪುರಂ, ಪುದುಕೊಟ್ಟಾಯ್, ಅರಿಯಾಲೂರ್, ಪೆರಂಬಲೂರು, ತಿರುಚಿ, ಕುಡ್ಡಲೋರ್, ವಿಳುಪುರಂ, ಕಲ್ಲಕುರಿಚಿ, ತಾಂಜಾವೂರು, ತಿರುವರೂರು, ವೆಲ್ಲೂರು, ತಿರುಪತ್ತೂರ್, ನಮಕ್ಕಲ್, ಕರೂರು, ನಾಗಪತ್ತಿನಂ, ಮಯಿಲಾದುತುರೈ ಹಾಗೂ ರಾಣಿಪೇಟೆಯಲ್ಲಿ ಶಾಲೆಗಳಿಗೆ ರಜೆ ಘೋಸಷಿಲಾಗಿದೆ.

ತಮಿಳುನಾಡಿನ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ

ತಿರುವಲ್ಲೂರು, ಚೆನ್ನೈ, ರಾಮನಾಥಪುರಂ, ತಿರುನೇಲ್‌ವೇಲಿ, ಥೂತುಕುಡಿ, ತಾಂಜಾವೂರ್, ತಿರುವಾರೂರ್, ತಿರುಪತ್ತೂರು, ನಾಗಪಟ್ಟಣಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 6ರವರೆಗೆ ತಮಿಳುನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.ದೀಪಾವಳಿ ಹಬ್ಬ ಮುಗಿಯುವವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ಬಲವಾದ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago