ರಾಜ್ಯಾದ್ಯಂತ 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆ

ಬೆಂಗಳೂರು : ನಾಳೆ ರಾಜ್ಯಾದ್ಯಂತ 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 400 ರಿಂದ 500 ಶಿಕ್ಷಕರಿಗೆ ಮಾತ್ರ ಅವಕಾಶ ಇರಲಿದೆ.

ನಾಳೆ ಬೆಳಗ್ಗೆ 9 ಗಂಟೆಯಿಂದ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ 66 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ಆಯೋಜಿಸಿರುವಂತ ಕಾರ್ಯಕ್ರಮದಲ್ಲಿ 66 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ, ಗೌರವಿಸಲಿದೆ.

ರಾಜ್ಯ ಸರ್ಕಾರವು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿದ್ದು, ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸೂಚನೆ ನೀಡಲಾಗಿದೆ. ಕಳೆದ ಬಾರಿ ರಾಜ್ಯೋತ್ಸವದ ಸಂದರ್ಭದಲ್ಲಿ ಶಾಲೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಹೀಗಾಗಿ ಶಾಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Gayathri SG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

14 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago