News Karnataka Kannada
Monday, April 29 2024
ಬೆಂಗಳೂರು

ರಾಜ್ಯ ರಾಜಧಾನಿಗೆ ಒಟ್ಟು 7 ಜನ ಸಚಿವರ ಭಾಗ್ಯ

Basavaraj Bommaih V Ponnuraj 01082021
Photo Credit :

ಬೆಂಗಳೂರು, – ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಸುರೇಶ್‍ಕುಮಾರ್, ಅರವಿಂದ ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಕೈ ಹಿಡಿದಿದ್ದ ಮುನಿರತ್ನ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲಾಗಿದೆ.
ಕಳೆದ ಬಾರಿ ರಾಜಧಾನಿ ಬೆಂಗಳೂರಿಗೆ 9 ಮಂದಿಗೆ ಸ್ಥಾನ ನೀಡಲಾಗಿತ್ತು. ಅದರಲ್ಲಿ ಸುರೇಶ್‍ಕುಮಾರ್, ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ.ಹಾವೇರಿ, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ , ತುಮಕೂರು, ಬಾಗಲಕೋಟೆ ಜಿಲ್ಲೆಗಳಿಗೆ ಡಬಲ್ ಧಮಾಕ , ಈ ಜಿಲ್ಲೆಗಳ ಇಬ್ಬರು ಶಾಸಕರುಗಳಿಗೆ ಸಚಿವ ಸ್ಥಾನ ನೀಡಲಾಗಿದೆ. 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು