ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಯಶವಂತಪುರ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.