ಬೆಂಗಳೂರು

ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಕಟ್ಟಡ ಕುಸಿತ: ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆಯಷ್ಟೇ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಇಂದು ಕೂಡ ಮತ್ತೊಂದು ಕಟ್ಟಡ ಕುಸಿತವಾಗಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟರ‍್ಸ್ ಒಳಗೆ ಇರುವ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದಾರೆ. ಕುಸಿತವಾದ ಕಟ್ಟಡ 50 ವರ್ಷ ಹಳೆಯದ್ದಾಗಿದೆ. ನಾಳೆ ಕೆಎಂಎಫ್‌ನಲ್ಲಿ ಸಿಎಂ ಕಾರ್ಯಕ್ರಮ ಆಯೋಜಿಸಿದ್ದು, ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಮನೆ ನೀಡಲಾಗಿತ್ತು.

ಒಟ್ಟಾರೆ ಇಲ್ಲಿ 18 ಕುಟುಂಬ ವಾಸವಾಗಿದ್ದು, ಕುಸಿತ ಆರಂಭವಾಗುತ್ತಿದ್ದಂತೆ ಎಲ್ಲರೂ ಮನೆಯಿಂದ ಹೊರ ಬಂದಿದ್ದಾರೆ.
ಆದರೂ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ನಿವಾಸಿಯೊಬ್ಬರು ಮಾತನಾಡಿ, ಕಟ್ಟಡ ಬೀಳುವ 5 ನಿಮಿಷದ ಹಿಂದೆ ನಾವು ಮನೆಯಿಂದ ಓಡಿಬಂದ್ವಿ. ತಿಂಡಿ ತಿನ್ನುತ್ತಾ ಕುಳಿತಿದ್ದ ವೇಳೆ ಹೊರಗಿನಿಂದ ಸದ್ದು ಬಂತು. ಮನೆ ಬೀಳುತ್ತಿದೆ ಹೊರಬನ್ನಿ ಎಂದರು. ತಕ್ಷಣವೇ ಓಡಿ ಬಂದೆವು ಎಂದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago