ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಗರದ ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಆರ್ ಆರ್ ನಗರ, ಕೊತ್ತೂರು ದಿಣ್ಣೆ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ವಿವಿದೆಡೆ ಟ್ರಾಫಿಕ್ ಜಾಮ್ ಆಗಿವೆ.
ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ, ಕೆಲವು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.