ರಾಜ್ಯ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಸಲ್ಲಿಸುವಂತಿಲ್ಲ

ಬೆಂಗಳೂರು: ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಇತ್ತೀಚೆಗೆ ಎಲ್ಲಾ ಕಚೇರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ತಿಳಿಸಿದ್ದಾರೆ. ಅನಾಮಧೇಯ ಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಂತೆ ಮತ್ತು ಮಾನ್ಯವಾದ ಹೆಸರು ಮತ್ತು ವಿಳಾಸಗಳನ್ನು ಹೊಂದಿರುವ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಎಲ್ಲಾ ಇಲಾಖೆ ಮುಖ್ಯಸ್ಥರು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಪ್ರಮುಖವಾಗಿ ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಸಂಬಂದ ಸರ್ಕಾರಕ್ಕೆ ಪ್ರತಿ ವರ್ಷ ನೂರಾರು ಅನಾಮಧೇಯ ಪತ್ರಗಳು ಬರುತ್ತವೆ, ಪತ್ರದ ಮೇಲೆ ಗುರುತು, ವಿಳಾಸ ಬರೆದರೆ ಅಪಾಯದ ಸಾಧ್ಯತೆಯಿರುವ ಕಾರಣ ದೂರುದಾರರು ತಮ್ಮ ಹೆಸರು ಮತ್ತು ವಿಳಾಸ ನಮೂದಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಇದಕ್ಕಾಗಿ ದೇಶದಲ್ಲಿ ಆರ್ ಟಿ ಐ ಕಾರ್ಯಕರ್ತರು ಮತ್ತು ಪತ್ರಕರ್ತರು ತಮ್ಮ ಪ್ರಾಣವನ್ನೇ ತೆತ್ತಿರುವ ಘಟನೆಗಳು ನಡೆದಿವೆ. ಮಹತ್ವದ ಮಾಹಿತಿಗಳನ್ನು ನೀಡುವ ಮಾಹಿತಿದಾರರಿಗೆ ರಕ್ಷಣೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಜವಾಬ್ದಾರಿಯಿಲ್ಲ, ಸರ್ಕಾರದ ಈ ನಿರ್ಧಾರ ನನಗೆ ಅಚ್ಚರಿ ತಂದಿಲ್ಲ, ಶವ ಪೆಟ್ಟಿಗೆಗೆ ಹೊಡೆಯಯುತ್ತಿರುವ ಕೊನೆಯ ಮೊಳೆ ಇದಾಗಿದೆ ಎಂದು ಐ ಪೇಯ್ಡ್ ಬ್ರೈಬ್ ಅಭಿಯಾನದ ಮೂಲದ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಟಿ ಆರ್ ರಘುನಂದನ್ ಹೇಳಿದ್ದಾರೆ.

ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುುಳುಗಿವೆ, ಕರ್ನಾಟಕ ಕೂಡ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪಟ್ಟಿಯಲ್ಲಿದೆ ಎಂದು ತಿಳಿಸಿದ್ದಾರೆ. ನಮ್ಮಲ್ಲಿ ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಿರುವ ಮತ್ತು ಶಿಕ್ಷಿಸುವ ಪ್ರಕರಣಗಳು ನಡೆದಿವೆ. ಆರ್‌ಟಿಐ ಕಾಯ್ದೆಯಡಿ ಮೇಲ್ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹೀಗಾಗಿ ಸುಮಾರು 20,000-30,000 ಮೇಲ್ಮನವಿಗಳು ಬಾಕಿ ಉಳಿದಿವೆ ಎಂದು ಅವರು ಹೇಳಿದ್ದಾರೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago