News Karnataka Kannada
Thursday, May 09 2024
ಬೆಂಗಳೂರು

ರೈಲ್ವೆ ಕಾಮಗಾರಿಯಲ್ಲಿ ಮಕ್ಕಳ ಬಳಕೆ : ರಾಜ್ಯ ಮಾನವ ಹಕ್ಕುಗಳ ಅಯೋಗದಿಂದ ನೋಟೀಸ್ ಜಾರಿ

New Project (46)
Photo Credit :
ಬೆಂಗಳೂರು : ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಆಯುಕ್ತರು ಮತ್ತು ರಾಮನಗರ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ನಲ್ಲಿ ಪ್ರಕರಣ ಸಂಬಂಧ ಆಗಸ್ಟ್ 16ರೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದು, ಆಗಸ್ಟ್ 17 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಎಂದು ತಿಳಿದುಬಂದಿದೆ.
ರೈಲ್ವೆ ಕಾಂಟ್ರಾಕ್ರ್ ಒಬ್ಬರು ಕಲ್ಲು ಹೊರುವಂತಹ ಕಠಿಣ ಕೆಲಸಗಳನ್ನು ಬೆಂಗಳೂರು ರೈಲ್ವೆ ವಿಭಾಗದ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣದ ರೈಲ್ವೆ ಹಳಿ ಬಳಿ ಮಕ್ಕಳಿಂದ ಮಾಡಿಸುತ್ತಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟವಾಗಿತ್ತು.
ಪತ್ರಿಕೆಯಲ್ಲಿ ವರದಿ ಬಂದ ತಕ್ಷಣ ಅದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದು, ಇದೀಗ ಮೂವರು ಅಧಿಕಾರಿಗಳಿಗೆ ನೋಟಿಸ್ ಮಾಡಿ ಮಾಡಿದೆ ಎಂದು ತಿಳಿದುಬಂದಿದೆ.
ಈ ನಡುವೆ ಎಫ್‌ಐಆರ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನೆಲಮಂಗಲ ಮೂಲದ ಸಚಿನ್ ಕನ್‌ಸ್ಟ್ರಕ್ಷನ್‌ನ ಗುತ್ತಿಗೆದಾರ ಗೋವಿಂದರಾಜ್ ನಾಗಮುನಿ, ನಿನ್ನೆ ಸಂಜೆ 1,40,000 ರೂ.ಗಳ ಚೆಕ್ ಅನ್ನು ಕಾರ್ಮಿಕ ನ್ಯಾಯಾಲಯಕ್ಕೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಈ ದಂಡದ ಹಣವನ್ನು ಪ್ರತಿ ಮಗುವಿಗೆ 20,000 ರೂ.ಗಳಾಗಿ ವಿಭಜಿಸಿ ಖಾತೆಗೆ ಜಮಾ ಮಾಡಲಾಗುತ್ತದೆ. ಮಕ್ಕಳಿಗೆ 18 ವರ್ಷ ತುಂಬಿದ ನಂತರ ಈ ಹಣ ಅವರ ಕೈ ಸೇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು