ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ

ಬೆಂಗಳೂರು: ರಾಷ್ಟ್ರಕವಿ‌ ಕುವೆಂಪು ರಚಿಸಿರುವ ನಾಡಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ರಾಜ್ಯಕ್ಕೆ ಮಾಡಿರುವ ಅಪಮಾನ‌. ಸರ್ಕಾರ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.

ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜತೆ ಈ ಬಗ್ಗೆ ಚರ್ಚಿಸಲಾಗುವುದು.‌ ನಾಡಿನ ಆರೂವರೆ ಕೋಟಿ ಕನ್ನಡಿಗರು ಸ್ವೀಕರಿಸಿರುವ ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರಿಯಲ್ಲ. ಜಗದ ಕವಿ, ಯುಗದ ಕವಿಯೆಂದು ಖ್ಯಾತಿ ಪಡೆದಿರುವ ಕುವೆಂಪು ಬಗ್ಗೆ ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿರುವುದನ್ನು ಸಂಘದ ಅಧ್ಯಕ್ಷ ಖಂಡಿಸಿದರು.

ಕುವೆಂಪು ಅವರಿಗೆ ಕುವೆಂಪು ಅವರೇ ಸರಿಸಾಟಿ. ರೋಹಿತ್ ಚಕ್ರತೀರ್ಥ ಕುವೆಂಪು ನಾಡಗೀತೆಯನ್ನು ಅಗೌರವಗೊಳಿಸಿರುವುದು ನಾಡಿನಾದ್ಯಂತ ಅಲ್ಲದೆ ದೇಶ ವಿದೇಶಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 2019ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರಿಗೆ ನೋಟಿಸ್ ನೀಡಿತ್ತು‌. ಕುವೆಂಪು ದೇವರು ಮತ್ತು ಧರ್ಮವನ್ನು ಸ್ವಾರ್ಥಕ್ಕೆ ಬಳಸುವವರ ವಿರುದ್ಧ ತಮ್ಮ ಕವನಗಳಲ್ಲಿ ಖಂಡಿಸಿದ್ದರು ಎಂದರು.

ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ಅವರ ಗುರುಗಳಿಗೆ ಸರ್ಮಪಿಸಿದ್ದರು. ಸರ್ವ ಜನಾಂಗದ ಶಾಂತಿ ತೋಟಕ್ಕೆ ಪೂರಕವಾಗಿರುವ ಈ ನಾಡಗೀತೆಯನ್ನು ಪದೇಪದೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ.‌ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದಲ್ಲಿ ನಮ್ಮ‌ ಜನಾಂಗದ ಸಚಿವರು ತಕ್ಷಣ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ತರಬೇಕು. ಎಲ್ಲರೂ ಎದ್ದು ನಿಂತು ಗೌರವಿಸುವ ನಾಡಗೀತೆ‌.‌ ಇದು ಸರ್ಕಾರಕ್ಕೆ ಅಗೌರವ‌ ಪ್ರಶ್ನೆಯಾಗಿದೆ. ಶಿಕ್ಷಣ ತಜ್ಞರು, ಸಾಹಿತಿಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರದ ಕಣ್ಣುತೆರೆಸುವ ಕೆಲಸವನ್ನು ಸದ್ಯ ಮಾಡುತ್ತಿದ್ದೇವೆ. ಸರ್ಕಾರದ ಎಚ್ಚೆತ್ತುಕೊಳ್ಳದಿದ್ದರೆ ಸಮುದಾಯ, ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದರೆ ಸರ್ಕಾರವೇ ಹೊಣೆ. ರೋಹಿತ್ ಚಕ್ರತೀರ್ಥ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ನಾಡಗೀತೆ‌ಗೆ ಅವಮಾನ ಮಾಡಿರುವುದು ಸರ್ಕಾರಕ್ಕೆ ಅವಮಾನ‌ ಮಾಡಿದಂತಾಗಿದೆ ಎಂದು ಸಿ.ಎನ್.ಬಾಲಕೃಷ್ಣ ಎಚ್ಚರಿಸಿದರು.

Ashika S

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

13 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

31 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

46 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago