ವನವಾಸಿ ಮಹಿಳೆಯಿಂದ ಕೃಷಿ ಮೇಳಕ್ಕೆ ಚಾಲನೆ

ಬೆಂಗಳೂರು: ಇಲ್ಲಿನ ಬೆಂಗಳೂರು ಕೃಷಿ ‌ವಿಶ್ವವಿದ್ಯಾಲಯದ ಆವರಣ ಜಿಕೆವಿಕೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ವಾರ್ಷಿಕ ಕೃಷಿ ಮೇಳಕ್ಕೆ ಚಾಲನೆ ಸಿಕ್ಕಿದೆ.

ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಮೇಳ ಉದ್ಘಾಟಿಸಿದ್ದು, ಮೈಸೂರು ಜಿಲ್ಲೆಯ ನಾಗರಹೊಳೆಯ ಪುನರ್ವಸತಿಯ ವನವಾಸಿ ಮಹಿಳೆ ಪ್ರೇಮಾ ದಾಸಪ್ಪ ಅವರು ಮೇಳಕ್ಕೆ ಚಾಲನೆ ನೀಡಿದರು.

ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಮೇಳದಲ್ಲಿ ಭಾಗವಹಿಸಿಲ್ಲ. ಕೃಷಿ ವಿವಿ ಕುಲಪತಿ ಡಾ. ರಾಜೇಂದ್ರಪ್ರಸಾದ್, ಕೃಷಿ ತಜ್ಞ ಡಾ.ಅಯ್ಯಪ್ಪನ್ನ ಮತ್ತಿತರರು ಭಾಗಿಯಾಗಿದ್ದಾರೆ.

ಇದೇ ವೇಳೆ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾಧಕ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಟಿ ಜಿಟಿ ಮಳೆ ಮಧ್ಯೆ ಕೃಷಿ ಮೇಳ ಆರಂಭವಾಗಿದೆ. ಮಳೆಯಿಂದಾಗಿ ಮಳಿಗೆಗಳ ಬಳಿ ಕೆಸರಿನ ಸ್ಥಿತಿ ಇದೆ. ಸಾರ್ವಜನಿಕರು ಓಡಾಡಲು ತೊಂದರೆ ಅನುಭವಿಸುತ್ತಿದ್ದಾರೆ. ರೈತರು ಮಳಿಗೆಗಳತ್ತ ತೆರಳಿ, ಮಾಹಿತಿಯನ್ನು ಪಡೆಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ರೈತರ ಆದಾಯ ದ್ವಿಗುಣಕ್ಕೆ ವಿವಿಯು ಪ್ರಾತ್ಯಕ್ಷಿಕೆ ಮಾದರಿಯನ್ನು ಅಭಿವೃದ್ಧಿ ಪಡಿಸಿದೆ. ಎಣ್ಣೆ ಕಾಳು ಬೆಳೆಗಳ ಅಭಿವೃದ್ಧಿಗಾಗಿ ವಿವಿದ ಮಾದರಿಗಳನ್ನು ಪ್ರದರ್ಶಿಸಲಾಗಿದೆ. ಜಾನುವಾರುಗಳು ಕೃಷಿ ಮೇಳದ ಆಕರ್ಷಣೆಯಾಗಿವೆ. ಹೋರಿ, ಹೋತ, ಮೇಕೆಗಳು ಪ್ರದರ್ಶನದಲ್ಲಿದ್ದು, ಸಾರ್ವಜನಿಕರನ್ನು ಸೆಳೆಯುತ್ತಿವೆ.

Sneha Gowda

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

31 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

34 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

57 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago