ಬೆಂಗಳೂರು : ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು. ಅಸಂಘಟಿತ ವಲಯದ ಕಾರ್ಮಿಕರಾದ ಆಟೋ, ಟ್ಯಾಕ್ಸಿ, ಲಾರಿ ಹಾಗೂ ಬಸ್ ಚಾಲಕರು ಆರ್ಥಿಕವಾಗಿ ದುರ್ಬಲರಾಗಿದ್ದು ಅವರ ಸಾಮಾಜಿಕ ಭದ್ರತೆಗಾಗಿ ಕರ್ನಾಟಕ ಮೋಟಾರ ಹಾಗೂ ಅದಕ್ಕೆ ಸಂಬಂಧಿಸಿದ ಕಾಯ್ದೆಯನ್ನು ಪ್ರಾರಂಭಿಸುವುದಕ್ಕೆ ಸಚಿವರು ಕಾರ್ಯಪ್ರರ್ವತರಾಗಿದ್ದಾರೆ.
ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡ ದಿನದಂದೇ ಅಸಂಘಟಿತ ಕಾರ್ಮಿಕರ ಸಾಮಾಜಿಕ, ಆರ್ಥಿಕ ಭದ್ರತೆಗಾಗಿ ವಿಶೇಷ ಯೋಜನೆಗಳನ್ನು ಸಚಿವರು ಚಾಲನೆ ನೀಡಿರುವುದು ಶ್ರಮಿಕ ವರ್ಗದವರಿಗೆ ಹೊಸ ಚೈತನ್ಯ ತುಂಬಿದಂತಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.