ವಿಚಾರಣೆಗೆ ಕರೆ ತಂದಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಸಾವು

ಬೆಂಗಳೂರು, – ಮಾದಕ ವಸ್ತು ಕಳ್ಳ ಸಾಗಾಣಿಕೆ ಆರೋಪದಡಿ ವಿಚಾರಣೆಗಾಗಿ ಕರೆ ತರಲಾಗಿದ್ದ ಆಫ್ರಿಕನ್ ಪ್ರಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 5 ಗ್ರಾಂ ಎಂಡಿಎಂಎ ಮಾದಕ ವಸ್ತು ಮಾತ್ರೆಗಳನ್ನು ಹೊಂದಿದ್ದ ಆಫ್ರಿಕನ್ ಪ್ರಜೆಯನ್ನು ಜೆ.ಸಿ.ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿಚಾರಣೆಗಾಗಿ ಕರೆ ತಂದಿದ್ದರು.  ಆರೋಪಿ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದು ತಕ್ಷಣವೇ ಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಇದು ಪೊಲೀಸ್ ವಶದಲ್ಲಿದ್ದಾಗಿನ ಸಾವು ಎಂದು ಪರಿಗಣಿಸಲಾಗುವುದಿಲ್ಲ. ಮೃತಪಟ್ಟ ಆಫ್ರಿಕನ್ ಪ್ರಜೆಯ ವಿಳಾಸ ಮತ್ತು ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago