News Karnataka Kannada
Saturday, May 04 2024
ಬೆಂಗಳೂರು

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂದಿದೆ: ಮುಖ್ಯಮಂತ್ರಿ

Untitled 1
Photo Credit :

ಬೆಂಗಳೂರು: ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದ್ದು, ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬ‌ಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾಳೆಯಿಂದ ಒಂದು ವಾರ ದಾವೂಸ್​ನಲ್ಲಿ ನಡೆಯುವ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಕಳೆದ ನಾಲ್ಕು ತ್ರೈಮಾಸಿಕದಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ಹೆಚ್ಚು ವಿದೇಶಿ ಬಂಡವಾಳ ಬಂದಿದೆ.‌ ಇದರಕ್ಕೆ ರಾಜ್ಯ ಮೊದಲ ಸ್ಥಾನದಲ್ಲಿದೆ. ಹಾಗಾಗಿ ನಮಗೆ ಹೆಚ್ಚು ಉತ್ಸಾಹ ಇದೆ ಎಂದರು.

ಇನ್ನೂ ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ರಾಜ್ಯದಲ್ಲಿ ‌ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್‌ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಈ ಎಲ್ಲ ಪ್ರಕಿಯೆಗಳ ಮಧ್ಯೆ ದೇಶ ಮತ್ತು ವಿದೇಶಗಳ‌ ಹಲವಾರು ಕೈಗಾರಿಕೆಗಳು ರಾಜ್ಯದಲ್ಲಿ ಸ್ಥಾಪನೆಗೊಳ್ಳಲಿವೆ ಎಂದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಗಣಿ ಖಾತೆ ಸಚಿವ ಸಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುನಿರತ್ನ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು