News Karnataka Kannada
Sunday, May 12 2024
ಬೆಂಗಳೂರು

ವಿಧಾನಸೌಧದ ಮೆಟ್ಟುಲುಗಳ ಮೇಲೆ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಸಾಮೂಹಿಕ ಗೀತ ಗಾಯನ : ಸಚಿವ ಸುನೀಲ್ ಕುಮಾರ್ ಚಾಲನೆ

Flag
Photo Credit :

ಬೆಂಗಳೂರು : ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ವಿಧಾನಸೌಧದ ಮೆಟ್ಟುಲುಗಳ ಮೇಲೆ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಸಾಮೂಹಿಕ ಗೀತ ಗಾಯನದ ಮೂಲಕ ಸಚಿವ ಸುನೀಲ್ ಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಂತು ಸಾವಿರಾರು ಗಾಯಕರು ಕನ್ನಡದ ಪ್ರಸಿದ್ದ ಮೂರು ಹಾಡುಗಳಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳಿಗೆ ದ್ವನಿಯಾದರು.

ಸಾಮೂಹಿಕ ಗೀತ ಗಾಯನ ಕಾರ್ಯಕ್ರಮದಲ್ಲಿ ಸಚಿವ ಸುನೀಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ವಿಮಾನ ನಿಲ್ದಾಣ, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲೂ ಸಹಸ್ರ ಕಂಠ ಗೀತ ಗಾಯನ ನಡೆಯಲಿದೆ. ಇನ್ನು ಮೆಟ್ರೋದ ಎಲ್ಲಾ ರೈಲು ನಿಲ್ದಾಣಗಳಲ್ಲಿಯೂ ಸುಗಮ ಸಂಗೀತ ಗಾಯನ ತಂಡಗಳು ಈ ಮೂರು ಗೀತೆಗಳಿಗೆ ದ್ವನಿಯಾಗಲಿದ್ದಾರೆ. ಒಟ್ಟಾರೆ ಈಬಾರಿ ಕನ್ನಡ ರಾಜ್ಯೋತ್ಸವವನ್ನು ವಿನೂತನವಾಗಿ ಕನ್ನಡಕ್ಕಾಗಿ ನಾವು ಎಂಬ ಅಭಿಯಾನದ ಮೂಲಕ ಆಚರಿಸಲಾಗುತ್ತಿದ್ದು, ನಾಡಿನಾದ್ಯಂತ 5 ಲಕ್ಷಕ್ಕೂ ಹೆಚ್ಚು ಜನರು ಸಾಮೂಹಿಕ ಗೀತ ಗಾಯನದ ಮೂಲಕ ಅಭಿಯಾನಕ್ಕೆ ಬೆಂಬಲ ನೀಡುತ್ತಿರುವುದು ವಿಶೇಷ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು